ನ್ಯೂಸ್

ಅಮೆರಿಕದಲ್ಲಿ ಶಿವಣ್ಣಗೆ ಸರ್ಜರಿ: ಫೋನ್​ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ | Shivanna

ಬೆಂಗಳೂರು: ಕನ್ನಡ ಚಲನಚಿತ್ರದ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​(Shivanna) ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಅವರಿಗೆ ಇಂದು(ಡಿ.24) ಅಮೆರಿಕಾದ ಮಿಯಾಮಿಯ ಆಸ್ಪತ್ರೆಯಲ್ಲಿ ಸರ್ಜರಿ ನಡೆಯುತ್ತಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಶಿವಣ್ಣಗೆ ಫೋನ್​ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.

ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ ಎಂದಿದ್ದಾರೆ.

ಇನ್ನು ಶಿವಣ್ಣ ಬೇಗ ಗುಣಮುಖರಾಗಲೆಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅವರ ಅಭಿಮಾನಿಗಳು ವಿವಿಧ ದೇವಸ್ಥಾನಗಳಲ್ಲಿ ಇಂದು(ಡಿ23) ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಶಿವರಾಜ್​ ಕುಮಾರ್​ ಮತ್ತಿ ಪತ್ನಿ ಗೀತಾ ಇದೇ ಡಿ.18ರಂದು ಅಮೆರಿಕಾಕ್ಕೆ ತೆರಳಿದಿದ್ದಾರೆ. ಅಮೆರಿಕಾಕ್ಕೆ ಹೋಗುವ ಮೊದಲು ಕನ್ನಡ ಚಿತ್ರರಂಗದ ಹಲವು ಗಣ್ಯರು ಶಿವಣ್ಣ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.