ಮಂಡ್ಯ: ಕನ್ನಡದ ಜೀವನದಿ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಇಂದು (30) ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.
ಇದನ್ನೂ ಓದಿ: ಪ್ರಾಣಿಗಳಿಲ್ಲದ ಜೀವನವನ್ನು ಊಹಿಸಲೂ ಸಾಧ್ಯವಿಲ್ಲ; ಪ್ರಾಣಿಗಳು 'ಜೀವನದ ಸಂಪತ್ತು’ ಎಂದ ದ್ರೌಪದಿ ಮುರ್ಮು| president
ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯವನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು. ಅಣೆಕಟ್ಟೆ ಗೋಡೆಗೆ ಸುಣ್ಣ, ಬಣ್ಣ ಬಳೆದಿದ್ದು ಎಲ್ಲೆಡೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದ ದೃಶ್ಯ ಕಂಡು ಬಂದಿತ್ತು.
ದೇವರಾಜ ಅರಸು ಕಾಲದಲ್ಲಿ 1979 ರಿಂದ ಬಾಗಿನ ಅರ್ಪಿಸುವ ಕಾರ್ಯಕ್ರಮ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ಜೂನ್ ತಿಂಗಳಲ್ಲಿ ಯಾರು ಬಾಗಿನ ಸಲ್ಲಿಸಿಲ್ಲ. ಹೀಗಾಗಿ ಜೂನ್ ತಿಂಗಳಿನಲ್ಲೇ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 4ನೇ ಬಾರಿ ಕೆಆರ್‌ಎಸ್‌ಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದಾರೆ.
(ಏಜೆನ್ಸೀಸ್)
ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯಿತು. ಮೈಸೂರಿನ ಸರ್ಕಾರಿ ಅತಿಥಿ ಗೃಹದಿಂದ ಬಸ್ಸಿನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವ ಸಂಪುಟ ಸದಸ್ಯರು ಒಂದೇ ಬಸ್ನಲ್ಲಿ ಪ್ರಯಾಣಿಸಿ ಕೆಆರ್‌ಎಸ್‌ಗೆ ಆಗಮಿಸಿದರು.