ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ (Highcourt), ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿ ತಡೆಗೆ ವಿಭಾಗೀಯ ಪೀಠ ನಿರಾಕರಿಸಿದೆ.
- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಕೋರಿ ಸಿದ್ದರಾಮಯ್ಯ ಹಾಗೂ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ವಿವಾದಿತ ಭೂಮಿ ಮಾರಾಟ ಮಾಡಿದ್ದ ಜೆ.ದೇವರಾಜು ಸಲ್ಲಿಸಿದ ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್.
- ನಮ್ಮ ಕಕ್ಷಿದಾರರಿಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ, ಆದರೂ ವಿಚಾರಣೆಗೊಳಪಡಬೇಕಾಗಿದೆ, ಹೀಗಾಗಿ ಮೇಲ್ಮನವಿ ಪ್ರಶ್ನಿಸಿದ್ದೇವೆ. ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ ವಾದ.
- ರಾಜ್ಯಪಾಲರ ಅನುಮತಿ ಸರಿಯೋ ತಪ್ಪೋ ಎಂದಷ್ಟೇ ಹೇಳಬೇಕಿತ್ತು. ಆದರೆ, ಹೈಕೋರ್ಟ್ ಏಕಸದಸ್ಯ ಪೀಠ ದೇವರಾಜು ವಿರುದ್ಧ ಆದೇಶ ನೀಡಿದೆ. ದೇವರಾಜು ವಾದ ಆಲಿಸದೇ ಆದೇಶ ಹೈಕೋರ್ಟ್ ಆದೇಶ ನೀಡಿದೆ ಇದು ಒಪ್ಪುವಂತದಲ್ಲ.
- ಸಿಬಿಐ ತನಿಖೆ ಬಗ್ಗೆ ವಿಚಾರಣೆ ಸೂಕ್ತವಲ್ಲ., ಈಗಾಗಲೇ 24 ವರ್ಷಗಳಾಗಿವೆ. ಈಗ ಆಕಾಶ ಕಳಚಿ ಬೀಳುವುದಿಲ್ಲ. ಸಿಬಿಐ ತನಿಖೆ ಕೋರಿರುವ ಬಗ್ಗೆ ತುರ್ತು ವಿಚಾರಣೆ ಅಗತ್ಯವಿಲ್ಲ. ಇದು ದುರುದ್ದೇಶಪೂರಿತ ಅರ್ಜಿಯಾಗಿದೆ. ಹೀಗಾಗಿ ಮೇಲ್ಮನವಿ ವಿಚಾರಣೆವರೆಗೆ ಏಕಸದಸ್ಯ ಪೀಠಕ್ಕೆ ತಡೆ ನೀಡಬೇಕು. ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ ವಾದ ಮಂಡನೆ.
- ಹೈಕೋರ್ಟ್ ಏಕಸದಸ್ಯ ಪೀಠದ ವಿಚಾರಣೆಯಲ್ಲಿ ಹಸ್ತಕ್ಷೇಪ ಸಾಧ್ಯವಿಲ್ಲ. ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಅಭಿಪ್ರಾಯ.