ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜು ಎಂಸಿಎ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂದು ಹೇಳಿದ್ದಾರೆ.
ಪೊಲೀಸ್ ಅಧಿಕಾರಿಗಳ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ ಸಿಎಂ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದಲ್ಲದೆ ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ: ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ; ಸ್ಥಳದಲ್ಲಿದ್ದರು ಸಹಾಯಕ್ಕೆ ಬಾರದ ಪೊಲೀಸರು
ಪೊಲೀಸ್ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಮಾತನಾಡಿಸ ಸಿಎಂ ಸಿದ್ದರಾಮಯ್ಯ, ನೇಹಾಳ ಕೊಲೆ ಆಗಿರುವುದು ವೈಯಕ್ತಿಕ ಕಾರಣಕ್ಕೆ ಇದು ಲವ್ ಜಿಹಾದ್ ಅಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದು, ಅದನ್ನು ಕಾಪಾಡುವುದು ಸರ್ಕಾರದ ಕೆಲಸವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇತ್ತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ವಿಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದು, ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಂತಿಮವಾಗಿ ಇದು ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ.