ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ. ನಾನು ಇವರನ್ನು ಅಮವಾಸೆ ಸೂರ್ಯ ಅಂತ ಕರಿತೀನಿ. ರಾಜ್ಯದ ಆಗುತ್ತಿರುವ ಅನ್ಯಾಯ, ದ್ರೋಹದ ಬಗ್ಗೆ ಅಮವಾಸೆ ಸೂರ್ಯ ಇವತ್ತಿನವರೆಗೆ ಕೇಂದ್ರದಲ್ಲಿ ಬಾಯಿ ಬಿಟ್ಟಿದ್ದಾರಾ? ಎಂದು CM ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಇದನ್ನೂ ಓದಿ:ಸಮಾಜ ಒಪ್ಪದಿದ್ರೆ ಏನು? ಸಾವಿನಲ್ಲೇ ಒಂದಾಗೋಣ! ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವಿವಾಹಿತ ಮಹಿಳೆ | Couple Suicide
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ನಿಮ್ಮ ಪರವಾಗಿ ಪಾರ್ಲಿಮೆಂಟಿನಲ್ಲಿ ಬಾಯಿ ಬಿಟ್ಟಿದ್ದಾರಾ ಹೇಳಿ ಎಂದು ಸಿ.ಎಂ ಪ್ರಶ್ನಿಸಿದರು. ಸಚಿವರದ ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಅವರು ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಮೋಸ, ದ್ರೋಹದ ಬಗ್ಗೆ ಒಂದೇ ಒಂದು ದಿನ ಬಾಯಿ ಬಿಟ್ಟಿದ್ದಾರಾ ? ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಅವರು ಗೆದ್ದ ಪಾರ್ಲಿಮೆಂಟ್ ಕ್ಷೇತ್ರಕ್ಕಾಗಲೀ ಏನು ಸಿಕ್ಕಿದೆ ಹೇಳಿ ಎಂದು ಪ್ರಶ್ನಿಸಿದರು.
ಬಿಜೆಪಿಯ ಆರ್.ಅಶೋಕ್, ವಿಜಯೇಂದ್ರ ಸೇರಿ ಯಾರದ್ದೂ ಸ್ವಂತ ಮಾತು ಇಲ್ಲ. RSS ನವರು ಬರೆದುಕೊಟ್ಟಿದ್ದನ್ನು ಓದಿ ಹೋಗುವುದಷ್ಟೆ ಇವರ ಕೆಲಸ ಎಂದರು. ವಿಧಾನಸಭಾ ಅಧಿವೇಶನ ವೇಳೆ ಒಮ್ಮೆ ಆರ್.ಅಶೋಕ್ಗೆ ಕೇಳಿದ್ದೆ. ಆಗ ಆರ್.ಅಶೋಕ್ ಅವರು, "ಏನು ಮಾಡೋದು ಸರ್. RSS ನವರು ಒಬ್ರು ಬಂದು ಕೂತಿರ್ತಾರೆ. ಅವರು ಹೇಳಿದ್ದನ್ನು ಹೇಳದೇ ಹೋದರೆ ನಮ್ಮನ್ನು ಬಿಡಲ್ಲ ಸಾರ್" ಎಂದು ಉತ್ತರಿಸಿದ್ದರು ಎಂದರು.
ಹೊಸ ಹೊಸ ಹೊರ ವರ್ತುಲ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ 1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು. ದಿನೇಶ್ ಗುಂಡೂರಾವ್ ಅವರಂಥಾ ಶಾಸಕ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದರು.