ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ '70ನೇ ಕರ್ನಾಟಕ ರಾಜ್ಯೋತ್ಸ'ವವನ್ನು ಉದ್ಘಾಟಿಸಿ, 70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಕರ್ನಾಟಕ ಉದಯವಾಗಿ 70 ವರ್ಷಗಳು ಆಗಿರುವುದನ್ನು ಪರಿಗಣಿಸಿ 70 ಸಾಧಕರಿಗೆ ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು" ಎಂದರು.
ಇದನ್ನೂ ಓದಿ: ಪಾಕಿಸ್ತಾನಕ್ಕೆ ಕಾದಿದೆ ದೊಡ್ಡ ಗಂಡಾಂತರ! ಭಾರತದ ಆ ಒಂದು ಗಟ್ಟಿ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ | Pakistan
"ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರಿದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಯಿತು" ಎಂದು ಹೇಳಿದರು.