ನ್ಯೂಸ್

ನ.15 ರಂದು ದೆಹಲಿಗೆ ಸಿಎಂ: ಮಹತ್ವದ ಸುಳಿವು ಕೊಟ್ಟ ಸಿದ್ದರಾಮಯ್ಯ!

ಮೈಸೂರು: ಪಕ್ಷದ ಹಿರಿಯ ನಯಕರಾದ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನ.15 ರಂದು ದೆಹಲಿಗೆ ಹೋಗುತ್ತಿದ್ದೇನೆ. ಅವತ್ತೇ ವಾಪಾಸ್ ಬರುವ ಅಂದಾಜಿದೆ. ಹೈ ಕಮಾಂಡ್ ಸಮಯ ಕೊಟ್ಟರೆ ಭೇಟಿ ಆಗ್ತೀನಿ ಅಷ್ಟೆ. ಇನ್ನೂ ಹೈ‌ಕಮಾಂಡ್ ಸಮಯ ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದರು. ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್​​ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌ ಎಂದು ಸಿಎಂ ಆಗ್ರಹಿಸಿದರು. ಬಾಂಬ್ ಬ್ಲಾಸ್ಟ್ ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ ಎಂದರು.

ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ

ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಹೇಳಿದರು.

ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ. ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ ಆಗ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.