ನ್ಯೂಸ್

ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ! ಅದರ ಅಗತ್ಯವೂ ಇಲ್ಲ: ಸಚಿವ ಜಮೀರ್ ಅಹಮ್ಮದ್

ಬಳ್ಳಾರಿ: ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ. ಅದರ ಅಗತ್ಯವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಸಚಿವ ಜಮೀರ್ ಅಹಮ್ಮದ್ ಬ್ಯಾಟ್ ಬೀಸಿದ್ದಾರೆ.

ಮುಡಾ ಸೈಟು ಹಂಚಿಕೆ ಕೇಸ್​ನಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಿದ್ದಂತೆ ಸಿದ್ದರಾಮಯ್ಯನವರ ರಾಜೀನಾಮೆಗೆ ಪಟ್ಟುಹಿಡಿದಿರುವ ಬಿಜೆಪಿ ನಾಯಕರ ವಿರುದ್ಧ ಸಚಿವ ಜಮೀರ್​ ಗರಂ ಆಗಿದ್ದು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲ್ಲ. ಅವರದ್ದು ತಪ್ಪಿಲ್ಲ ಅಂದಮೇಲೆ ಏಕೆ ಕೊಡ್ತಾರೆ? ಎಂದಿದ್ದಾರೆ.