ನ್ಯೂಸ್

ಟೇಕಾಫ್​ ವೇಳೆ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

ಕೇರಳ: ಕೊಚ್ಚಿ ಬಳಿ ಟೇಕಾಫ್​ ವೇಳೆ ಕರಾವಳಿ ಕಾವಲು ಪಡೆಗೆ ಸೇರಿದ ಚಾಪರ್ ಪತನಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ALH ಧ್ರುವ ಹೆಲಿಕಾಪ್ಟರ್ ಮಧ್ಯಾಹ್ನ 12.30ರ ಸುಮಾರಿಗೆ ತರಬೇತಿ ಹಾರಾಟದ ಸಮಯದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೂಡಲೇ ಅಪಘಾತಕ್ಕೀಡಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಅಪಘಾತಕ್ಕೀಡಾಗಿದೆ.

ಮೂಲಗಳ ಪ್ರಕಾರ, ಹೆಲಿಕಾಪ್ಟರ್​​ನಲ್ಲಿ ಮೂವರು ಕೋಸ್ಟ್ ಗಾರ್ಡ್ ಸಿಬ್ಬಂದಿ ಇದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ನಂತರ ವಿಮಾನ ನಿಲ್ದಾಣವನ್ನು ಮುಚ್ಚಲಾಯಿತು. ವಿಮಾನಗಳನ್ನು ಹತ್ತಿರದ ಇತರ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಯಿತು. ಅಪಘಾತಕ್ಕೀಡಾದ ಹೆಲಿಕಾಪ್ಟರ್ ಅನ್ನು ತೆಗೆದುಹಾಕುವ ಪ್ರಯತ್ನಗಳು ಈಗಾಗಲೇ ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.