ರಾಣೆಬೆನ್ನೂರ: ಇತ್ತೀಚಿನ ದಿನಗಳಲ್ಲಿ ಸೈಬರ್ ಕೆಂ ಅಪರಾಧಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಮುಂಜಾಗ್ರತ ಕ್ರಮ ಕೈಗೊಳ್ಳುವುದರಿಂದ ಸೈಬರ್ ಕೆಂ ಅಪರಾಧ ತಡೆಗಟ್ಟಬಹುದು ಎಂದು ಹಾವೇರಿ ಸೈಬರ್ ಕೆಂ ಠಾಣೆ ಇನ್ಸಪೆಕ್ಟರ್ ಶಿವಶಂಕರ ಗಣಾಚಾರಿ ಹೇಳಿದರು.
ನಗರದ ಹಲಗೇರಿ ರಸ್ತೆಯ ಬಿಎಜೆಎಸ್ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಕೊಡಿಸುವ ನೆಪದಲ್ಲಿ, ಸಾಲ ಕೊಡುವ ಮತ್ತು ಮದುವೆ ಮಾಡುವ ಉಡುಗೊರೆ ಕೊಡುವ ನೆಪದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಬಹಳಷ್ಟು ವಂಚನೆಗಳು ನಡೆಯುತ್ತಿದೆ. ವಾಟ್ಸ್ಪ್ ಗ್ರೂಪ್ಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಬ್ಲಾ$್ಯಕ್ ಮೇಲ್ ಮಾಡಲಾಗುತ್ತಿದೆ. ಆದ್ದರಿಂದ ವಿದ್ಯಾಥಿರ್ಗಳು ಇದನ್ನು ಗಮನದಲ್ಲಿಟ್ಟುಕೊಂಡು ಜಾಗೃತರಾಗಿಬೇಕು. ಸೈಬರ್ ವಂಚನೆಗೆ ಒಳಗಾದ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಸಂಪಕಿರ್ಸಬೇಕು. ಮಾಹಿತಿ ನೀಡಬೇಕು ಎಂದರು.
ಪ್ರಾಚಾರ್ಯ ಡಾ. ಸುರೇಶ ಬಣಕಾರ ಅಧ್ಯಕ್ಷತೆ ವಹಿಸಿದ್ದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ರಾಜೀವ ಕೆ.ಎಂ., ಬಿಇಡಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಮೃತ್ಯುಂಜಯ ಎಂ.ಎಂ. ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.