ಪುಣೆ: ಪಾಠ ಮಾಡುವ ವೇಳೆ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಕಾಲೇಜು ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪೊಲೀಸರು ಎಬಿವಿಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ಧಾರೆ.
ಇದನ್ನೂ ಓದಿ: ಸೈಬರ್ ಕ್ರೈಂ ಇನ್ಸ್ಪೆಕ್ಟರ್, ಸಿಬ್ಬಂದಿಯನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿಲ್ಲ: ಡಿಸಿಪಿ ಎಸ್. ಗಿರೀಶ್
ಸಿಮ್ಬೈಯೋಸಿಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಶೋಕ್ ಧೋಲೆ(43) ತರಗಿತಯಲ್ಲಿ ಪಾಠ ಮಾಡುವ ವೇಳೆ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋವನ್ನು ವಿದ್ಯಾರ್ಥಿಯೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು.
ಈ ಸಂಬಂಧ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP), ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಸದಸ್ಯರು ಪ್ರತಿಭಟನೆ ನಡೆಸಿ ಡೆಕ್ಕನ್ ಜಿಮ್ಖಾನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಿಕ್ಷಕನ ವಿರುದ್ಧ ಭಾರತ ದಂಡ ಸಂಹಿತೆ(IPC Section) 295ರ ಅಡಿಯಲ್ಲಿ ಬಂಧಿಸಿದ್ದಾರೆ.