ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಗಿದಿವೆ. ವಿದ್ಯಾರ್ಥಿಗಳು ಅವರ ಪಾಲಕರು, ಹಾಗೂ ಶಿಕ್ಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಆದರೆ, ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಜು.31ರವರೆಗೆ ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ಅವಕಾಶವಿಲ್ಲವೆಂದು ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿದೆ.
ಇದನ್ನೂ ಓದಿ; ಧರಾಶಾಯಿಯಾಯ್ತು ಬಿಗ್ ಬಿ ಮನೆಯ 43 ವರ್ಷಗಳ ಇತಿಹಾಸ…!
ಈ ನಡುವೆ, ಕಾಲೇಜು ಹಾಗೂ ವಿಶ್ವ ವಿದ್ಯಾಲಯಗಳ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ ಎಂದು ಪಂಜಾಬ್ ಸರ್ಕಾರ ಘೋಷಿಸಿದೆ. ಈ ಹಿಂದಿನ ಪರೀಕ್ಷೆಗಳ ಸಾಧನೆಯನ್ನು ಆಧರಿಸಿ ಫಲಿತಾಂಶ ನೀಡಲಾಗುವುದು ಎಂದು ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.
ಫೇಸ್ಬುಕ್ ಲೈವ್ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಿಎಂ, ಈ ವಿಷಯ ಪ್ರಕಟಿಸಿದ್ದಾರೆ. ಆದರೆ, ಈಗಾಗಲೇ ಎಲ ವಿವಿಗಳು ಆನ್ಲೈನ್ ಮೂಲಕ ಪರೀಕ್ಷೆಗಳನ್ನು ನಡೆಸುತ್ತಿದ್ದು, ಅವುಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ; ಎದುರು ಬಂದವರ ಧರ್ಮ ಕೇಳಿ ಕೊಂದರು; ಶವಗಳನ್ನು ಚರಂಡಿಗೆಸೆದರು; ಪ್ರತ್ಯಕ್ಷದರ್ಶಿಗಳಿಂದ ಪೈಶಾಚಿಕತೆ ಅನಾವರಣ
ಇದರ ಹೊರತಾಗಿಯೂ ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಕರೊನಾ ಸಂಕಷ್ಟ ಮುಗಿದ ಬಳಿಕ ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ವಿವಿಗಳು ಹಾಗೂ ಕಾಲೇಜುಗಳು ಸರ್ಕಾರದ ಈ ನಿರ್ಧಾರವನ್ನು ಜಾರಿಗೊಳಿಸಲು ಸಿದ್ಧತೆಗಳನ್ನು ನಡೆಸುತ್ತಿವೆ. ಪರೀಕ್ಷೆಗಳು ರದ್ದಾಗಿದ್ದರೂ ವಿದ್ಯಾರ್ಥಿಗಳು ತಮ್ಮ ಅಭ್ಯಾಸವನ್ನು ಮುಂದುವರಿಸಬೇಕೆಂದು ಮನವಿ ಮಾಡಿದ್ದಾರೆ.