ನ್ಯೂಸ್

ಕರ್ನಲ್ ರಾಮಚಂದ್ರ ರಾವ್ ನಿಧನ

ಗೋಪಾಲಕೃಷ್ಣ ಪಾದೂರ್

ಉಡುಪಿ : ನಿವೃತ್ತ ಸೇನಾಧಿಕಾರಿ, ಸಮಾಜ ಸೇವಕ ಕರ್ನಲ್ ರಾಮಚಂದ್ರ ರಾವ್ (88 ವರ್ಷ) ಸೋಮವಾರ ರಾತ್ರಿ ನಿಧನ ಹೊಂದಿದ್ದಾರೆ.

ಭಾರತೀಯ ಭೂಸೇನೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ 1962ರ ಚೀನಾ, 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 197೧ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ನಿವೃತ್ತಿಯ ಬಳಿಕ ಉಡುಪಿಯಲ್ಲಿ ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ, ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

‘ನವೀನ್ ಪೇಜಾವರ ಟ್ರಸ್ಟ್’ ಮೂಲಕ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಯಕ್ಷಗಾನ ಕಲಾರಂಗ ವತಿಯಿಂದ ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗಿದೆ. ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಕೆ.ರಘುಪತಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.