ಶನಿವಾರಸಂತೆ: ಕೊಡ್ಲಿಪೇಟೆ ಸಮಿಪದ ಬ್ಯಾಡಗೊಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕಿ ರಿಜ್ವಾನ ಬಾನು ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡುವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ ಲಭಿಸಿದೆ.
ಇತ್ತಿಚೆಗೆ ಮಂಡ್ಯದ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಿಜ್ವಾನ ಬಾನುಗೆ ಪ್ರಶಸ್ತಿ ವಿತರಣೆ ಮಾಡಿದರು.