ನ್ಯೂಸ್

ಸೆ. 14ರಂದು ದೇಶದ 157 ನಗರದ 228 ಪರೀಕ್ಷಾ ಕೇಂದ್ರಗಳಲ್ಲಿ ಕಾಮೆಡ್​-ಕೆ ಪರೀಕ್ಷೆ; ನೋಂದಾಯಿಸಿಕೊಂಡ ವಿದ್ಯಾರ್ಥಿಗಳೆಷ್ಟು ಗೊತ್ತೇ?

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿರುವ ಸೀಟುಗಳ ಭರ್ತಿಗೆ ನಡೆಸುವ ಕಾಮೆಡ್-ಕೆ 2021ನೇ ಸಾಲಿನ ಪರೀಕ್ಷೆ ಸೆ.14ರಂದು ದೇಶದಾದ್ಯಂತ 157 ನಗರ 228 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷೆಯು ಆನ್‌ಲೈನ್ ಮೂಲಕ ನಡೆಯಲಿದೆ. ಪರೀಕ್ಷೆಗೆ 66,304 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ 5 ಸಾವಿರ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಬೆಳಗ್ಗೆ 9ರಿಂದ 12 ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5.30 ಈ ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದೆ.

ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅನುಸರಿಸಬೇಕಾದ ಸೂಚನೆಗಳನ್ನು ಎಸ್‌ಎಂಎಸ್ ಹಾಗೂ ಪ್ರವೇಶ ಪತ್ರದಲ್ಲಿ ನೀಡಲಾಗಿದೆ. ಪ್ರವೇಶ ಪತ್ರದ ಜತೆಗೆ ಎರಡು ಫೋಟೋ ತೆಗೆದುಕೊಂಡು ಹೋಗುವುದು ಕಡ್ಡಾಯ. ಅಭ್ಯರ್ಥಿಗಳು ಕರೊನಾ ಸುರಕ್ಷತಾ ಕ್ರಮ ಅನುಸರಿಸಿ ಪರೀಕ್ಷೆ ಬರೆಯುವಂತೆ ಕಾಮೆಡ್-ಕೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.