Yash, Vishal, Srinidhi Shetty At The 'KGF' Press Meet In Chennai 
ನ್ಯೂಸ್

ನಟ ಯಶ್ ಬೆಂಗಾವಲು ವಾಹನ ಹರಿದು ಗಾಯಗೊಂಡಿದ್ದ ಯುವಕನಿಂದ ದೂರು

ಬೆಂಗಳೂರು: ಯಶ್‌ ಬೆಂಗಾಲು ವಾಹನ ಹರಿದು ಗಾಯಗೊಂಡಿದ್ದ ವ್ಯಕ್ತಿಯು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

ನಡೆದಿದ್ದೇನು?: ಫೆಬ್ರವರಿ 29 ರಂದು ಬಳ್ಳಾರಿಯ ಅಮೃತೇಶ್ವರ ಸ್ಫಟಿಕ ಲಿಂಗ ದೇವಸ್ಥಾನ ಉದ್ಘಾಟನೆಗೆ ಯಶ್‌ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಅವರಲ್ಲಿ ಕೆಲವು ಯಶ್   ಅವರ ಕಾರನ್ನು ಹಿಂಬಾಲಿಸಿದ್ದರು. ಈ ಈ ವೇಳೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಬೆಂಗಾವಲು ಪಡೆಯ ವಾಹನ ಹರಿದಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

ಯುವಕ ಉಮೇಶ್ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತಮ್ಮ ಕಾಲ ಮೇಲೆ ಹರಿದ ಕಾರನ್ನು ಚಲಾಯಿಸುತ್ತಿದ್ದ ಚಾಲಕನ ಪತ್ತೆಗೆ ಒತ್ತಾಯಿಸಿದ್ದಾರೆ. ಕಾರಿನ ಚಾಲಕನಿಗೆ ಕಾನೂನು ರೀತಿ ಶಿಕ್ಷೆ ಆಗಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.