ನ್ಯೂಸ್

ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಅವರು ದೆಹಲಿಯಲ್ಲಿ ಆಯೋಗಕ್ಕೆ ದೂರು ಸಲ್ಲಿಸಿದ್ದು, ಕೃಷಿ ಜಮೀನಿನ ಬಗ್ಗೆ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಪತ್ನಿ ಹೆಸರಲ್ಲಿರುವ 3.16 ಎಕರೆ ಜಮೀನು ಬಗ್ಗೆ ಮಾಹಿತಿ ಮುಚ್ಚಿಟ್ಟ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಗಮನದಲ್ಲಿದ್ದೂ ಕೂಡ ಪತ್ನಿ ಹೆಸರಿನಲ್ಲಿರುವ ಕೃಷಿ ಜಮೀನಿನ ವಿವರಗಳನ್ನು ಮುಚ್ಚಿಡಲಾಗಿದೆ. ಉದ್ದೇಶ ಪೂರ್ವಕವಾಗಿ ಕಲಂ ಖಾಲಿ ಬಿಟ್ಟಿದ್ದಾರೆ. 2013ರ ಚುನಾವಣಾ ಅಫಿಡವಿಟ್‌ನಲ್ಲಿ ದಾಖಲೆಗಳು ಸಲ್ಲಿಕೆ ಆಗಿಲ್ಲ. ಹೀಗಾಗಿ ಭಾರತೀಯ ನ್ಯಾಯ ಸಂಹಿತೆಯ ಜನತಾ ಪ್ರಾತಿನಿಧ್ಯ ಕಾಯ್ದೆ ಅಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.