ಬೆಂಗಳೂರು: ಕೋಲಾರ ಜಿಲ್ಲೆ ಕ್ಯಾಸಂಬಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಮಹೇಶ್ ಕುಮಾರ್ ಮೇಲೆ ಹಲ್ಲೆಯನ್ನು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘ ಖಂಡಿಸಿದೆ.
ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಏಕಾಏಕಿ ನರೇಗಾ ಯೋಜನೆಯಡಿ ಸಾಮಾಗ್ರಿ ಬಿಲ್ ಪಾವತಿಸಿಲ್ಲ ಎಂದು ನೆಪ ಹೇಳಿಕೊಂಡು ಗ್ರಾಮ ಪಂಚಾಯಿತಿಯ ಸದಸ್ಯ ಗಂಡ ಆನಂದರೆಡ್ಡಿ ಆವ್ಯಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿಯನ್ನು ಬಂಧಿಸಿ, ಅವರ ಸದಸ್ಯತ್ವ ರದ್ದುಗೊಳಿಸುವಂತೆ ಸಂಘದ ಅಧ್ಯಕ್ಷ ರಾಜು ವಾರದ ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯಿತಿಗಳಿಗೆ ಬೀಟ್ ಪೊಲೀಸರು ಭೇಟಿ ನೀಡಬೇಕು. ಮಹಿಳಾ ಪಿಡಿಒಗಳು ಕರ್ತವ್ಯ ನಿರ್ವಹಿಸುತ್ತಿರುವ ಕಡೆಗಳಲ್ಲಿ ಹೊಮ್ ಗಾರ್ಡ್ ನೇಮಿಸಬೇಕು ಎಂದು ರಾಜು ಒತ್ತಾಯಿಸಿದ್ದಾರೆ.