ಗಜೇಂದ್ರಗಡ: ಪಟ್ಟಣದಲ್ಲಿ ಬೀದಿ ನಾಯಿಗಳು ಕಚ್ಚಿದ್ದರಿಂದ ಮೃತಪಟ್ಟ ಪ್ರೇಮಾ ಚೋಳಿನ ಅವರ ಮನೆಗೆ ಶಾಸಕ ಜಿ.ಎಸ್. ಪಾಟೀಲ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಪುರಸಭೆ ವತಿಯಿಂದ 3 ಲಕ್ಷ ರೂ. ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳನ್ನು ಆದಷ್ಟು ಶೀಘ್ರವಾಗಿ ಮುಟ್ಟಿಸುವ ಕಾರ್ಯ ಮಾಡುತ್ತೇನೆ ಎಂದು ಭರವಸೆ ನೀಡಿದ ಅವರು, ವೈಯಕ್ತಿಕವಾಗಿ ಪ್ರೇಮಾ ಅವರ ಕುಟುಂಬಕ್ಕೆ 50 ಸಾವಿರ ರೂ. ನೀಡಿದರು. ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ ಒದಗಿಸುವ ಭರವಸೆಯನ್ನೂ ನೀಡಿದರು. ಪುರಸಭೆ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಮುರ್ತುಜಾ ಡಾಲಾಯತ್, ಸಿದ್ದಣ್ಣ ಬಂಡಿ, ಸಿದ್ದಪ್ಪ ಚೋಳಿನ, ಅರಿಹಂತ ಬಾಗಮಾರ, ಸುರೇಶ ಚವಡಿ, ಬಸವರಾಜ ಶೀಲವಂತರ ಇತರರಿದ್ದರು.