ಬೆಳೆ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಶಿಕಾರಿಪುರ ತಹಸೀಲ್ದಾರ್ ಮಂಜುಳಾ ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಪ್ರಮೋದ್, ಪರಮೇಶ್ವರಪ್ಪ, ಬಲೀಂದ್ರಪ್ಪ, ಚಂದ್ರಶೇಖರ ಇತರರಿದ್ದರು.  
ನ್ಯೂಸ್

ಶೀಘ್ರ ಬೆಳೆ ಹಾನಿ ಸಮೀಕ್ಷೆ ನಡೆಸಿ

ಶಿವಕುಮಾರ ಎಸ್.ಪಿ.

ಶಿಕಾರಿಪುರ: ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗಳನ್ನು ಸಮೀಕ್ಷೆ ಮಾಡಿ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿ ರೈತ ಸಂಘ(ಎಚ್.ಆರ್.ಬಸವರಾಜಪ್ಪ ಬಣ) ತಾಲೂಕು ಶಾಖೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿದಿನ ಸುರಿಯುತ್ತಿರುವ ಮಳೆಯಿಂದಾಗಿ ಮೆಕ್ಕೆಜೋಳ ಸಂಪೂರ್ಣ ಹಾಳಾಗಿದೆ. ಕೃಷಿಗಾಗಿ ಸಾಲ ಮಾಡಿದವರು ಚಿಂತಾಕ್ರಾಂತರಾಗಿದ್ದಾರೆ. ತಕ್ಷಣ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಕಳಿಸಬೇಕು ಎಂದು ತಾಲೂಕು ಅಧ್ಯಕ್ಷ ಪ್ರಮೋದ್ ಆಗ್ರಹಿಸಿದರು.

ಅಡಕೆ ಬೆಳೆಗಾರರ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವೇನಲ್ಲ. ಅಧಿಕ ಮಳೆಯಿಂದ ಅಡಕೆ ಉದುರುತ್ತಿದೆ. ಉಳಿದ ಬೆಳೆಗಳೂ ಕೂಡ ರೈತರ ಕೈಗೆ ಸಿಗುವ ಲಕ್ಷಣಗಳಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರ ನೆರವಿಗೆ ಧಾವಿಸಬೇಕು. ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಗೌರವಾಧ್ಯಕ್ಷ ಪರಮೇಶ್ವರಪ್ಪ, ಜಿಲ್ಲಾ ಕಾರ್ಯದರ್ಶಿ ಬಲೀಂದ್ರಪ್ಪ, ತಾಲೂಕು ಕಾರ್ಯದರ್ಶಿ ಚಂದ್ರಶೇಖರ ಮಂಡಕ್ಕಿ, ಉಪಾಧ್ಯಕ್ಷರಾದ ಅಬ್ದುಲ್ ಮುನಾಫ್, ಚಂದ್ರಶೇಖರ ಇತರರಿದ್ದರು.