ನ್ಯೂಸ್

ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಸೇಡು: ಆರ್.ಅಶೋಕ್ ಆಕ್ರೋಶ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು, ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಪೆಟ್ರೋಲ್, ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್‌ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.