ನ್ಯೂಸ್

ಕಾಂಗ್ರೆಸ್ ಸರ್ಕಾರದ 'ಕಾವೇರಿ' ಬ್ಲೇಮ್ ಗೇಮ್; ಬಿ.ವೈವಿಜಯೇಂದ್ರ ಟೀಕೆ

ಬೆಂಗಳೂರು: ಕಾವೇರಿ ನೀರಿನ ವಿವಾದವನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದು ಬಿಟ್ಟು ಕೇಂದ್ರ ಸರ್ಕಾರದೆಡೆ ಬೊಟ್ಟು ರಾಜಕೀಯ ಬ್ಲೇಮ್ ಗೇಮ್ ಗೆ ಇಳಿದಿದೆ ಎಂದು ಬಿಜೆಪಿ ಶಾಸಕ, ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರವಾಗಿ ರಾಜ್ಯ ಸರ್ಕಾರ ಆರಂಭಿಕ ದಿನಗಳಿಂದಲೇ ಎಡವಿದೆ. ತಮಿಳುನಾಡು ಮೂರನೇ ಬೆಳೆ ಬೆಳೆಯಲು ನೀರು ಉಪಯೋಗ ಮಾಡಿದಾಗ ಎಚ್ಚರಿಕೆ ವಹಿಸಬೇಕಿತ್ತು. ಇದಕ್ಕೆ ಆ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಬೇಕಿತ್ತು ಎಂದರು.

ನೀರಿಗಾಗಿ ತಮಿಳುನಾಡು ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಕೂಡಲೇ ಮಧ್ಯಂತರ ಅರ್ಜಿ ಸಲ್ಲಿಸಿ, ನಮ್ಮಲ್ಲಿ ಒಂದು ಬೆಳೆಗೂ ನೀರು ಕೊಡಲಾಗಿಲ್ಲ. ಆದರೆ ತಮಿಖುನಾಡು ಮೂರನೇ ಬೆಳೆಗೆ ಒಂದು ಟಿಎಂಸಿ ನೀರನ್ನು ತಮಿಳುನಾಡು  ಉಪಯೋಗ ಮಾಡುತ್ತಿರುವುದನ್ನು

ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಕೊಡಲಿಲ್ಲ. ಈಗ ನಮ್ಮ ಜಲಾಶಯಗಳು ಖಾಲಿಯಾಗಿವೆ. ಮುಂದೆ ಕುಡಿಯುವ ನೀರಿನ ಸಮಸ್ಯೆಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದರು.

ಹಿಂದಿನ ಪ್ರಧಾನಿಗಳ ಮಧ್ಯೆ ಪ್ರವೇಶ ಫಲಪ್ರದವಾಗಿಲ್ಲ

ಪ್ರಧಾನಿ ನರೇಂದ್ರ ಮೋದಿ ಮಧ್ಯೆ ಪ್ರವೇಶಿಸಿ, ಬಿಕ್ಕಟ್ಟು ಬಗೆಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪದೇ ಪದೆ ಹೇಳುತ್ತಿದ್ದಾರೆ. ಹಿಂದಿನ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್, ಮನಮೋಹನ್ ಸಿಂಗ್ ಮಧ್ಯೆ ಪ್ರವೇಶಿಸಿದರೂ ಫಲಪ್ರದವಾಗಿದೆ. ಈ ವಿಷಯ ಗೊತ್ತಿದ್ದೂ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮೋದಿ ಪ್ರವೇಶದ ಬಗ್ಗೆ ಪ್ರಸ್ತಾಪಿಸಿ, ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ ಎಂದು ವಿಷಾದಿಸಿದರು.

ಕಾವೇರಿ ನ್ಯಾಯಾಧಿಕರಣದ ತೀರ್ಪು ಬಂದಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಉದ್ಭವಿಸಿದರೆ ಇವೆರಡೂ ಸ್ವಾಯತ್ತ ಸಂಸ್ಥೆಗಳು ಸಭೆ ಕರೆದು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಆದೇಶಿಸಿದೆ. ಹೀಗಾಗಿ ಮನಮೋಹನ್ ಸಿಂಗ್ ಪ್ರಯತ್ನ ಸಾಧ್ಯವಾಗಿಲ್ಲ. ಕಾವೇರಿ ಸಂಕಷ್ಟದಿಂದ ಜನರು ತತ್ತರಿಸಿರುವಾಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ಮಧ್ಯಸ್ಣಿಕೆಗೆ ಆಗ್ರಹಿಸುತ್ತಿರುವುದು ಶೋಭೆ ತರುವುದಿಲ್ಲ ಎಂದು ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದರು.