ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ಮುಂದಿನ ಆಗಸ್ಟ್ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಯೋಜನೆಯ ಫಲಾನುಭವಿಯಾಗಲು ಅರ್ಜಿ ಸಲ್ಲಿಸುವ ಮೊದಲು ಮನೆ ಯಜಮಾನಿ ಯಾರೆಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಅವರಲ್ಲಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಬೇಕು ಎಂದು ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಷರತ್ತುಗಳೇನು?