ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್‌ನಿಂದ ಡಿಸಿ ಕಚೇರಿ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆರ್.ಪ್ರಸನ್ನಕುಮಾರ್, ಎಚ್.ಸಿ.ಯೋಗೀಶ್, ಕಲಗೋಡು ರತ್ನಾಕರ್ ಇತರರಿದ್ದರು.  
ನ್ಯೂಸ್

ಕಾನೂನು ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ

ಶಿವಮೊಗ್ಗ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆ ಸೀಳಬೇಕು ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ, ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವೆ ಎಂದಿದ್ದ ಮಹಾರಾಷ್ಟ್ರದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಉತ್ತರ ಬ್ಲಾಕ್ ಸಮಿತಿ ಪ್ರಮುಖರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಉತ್ತರ ಬ್ಲಾಕ್ ಅಧ್ಯಕ್ಷ ಎಂ.ಎಸ್.ಶಿವಕುಮಾರ್, ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್, ಪ್ರಮುಖರಾದ ಕಲೀಂ ಪಾಶಾ, ಕವಿತಾ, ಸುವರ್ಣಾ ನಾಗರಾಜ್, ಚೇತನ್, ಮಧುಸೂದನ್, ರೇಷ್ಮಾ, ಗಾಡಿಕೊಪ್ಪ ರಾಜಣ್ಣ ಇತರರಿದ್ದರು.