ನ್ಯೂಸ್

ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ವಿಧಿವಶ

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್‌ (79) ಇಂದು ಬೆಳಗಿನ ಜಾವ 3 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಎರಡು ದಶಕಗಳಿಂದ ಕಾಂಗ್ರೆಸ್‌ ಜತೆಗಿದ್ದ ನಾಗರೆಡ್ಡಿ ಅವರ ಸಾವಿನ ಸುದ್ದಿ ರಾಜ್ಯ ರಾಜಕೀಯ ನಾಯಕರಲ್ಲಿ ಅತೀವ ದುಃಖ ತಂದೊಡ್ಡಿದೆ.

ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ, ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎಂದೇ ಹೆಸರುವಾಸಿಯಾಗಿದ್ದ ಡಾ. ನಾಗರೆಡ್ಡಿ ಪಾಟೀಲ್‌ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸೇಡಂ ಪಟ್ಟಣದಲ್ಲಿರುವ ಡಾ. ನಾಗರೆಡ್ಡಿ ಅವರ ಜಮೀನಿನಲ್ಲಿ ಇಂದು ಮಧ್ಯಾಹ್ನ 3:30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. 1983-1985ರ ಅವಧಿಯಲ್ಲಿ ನಾಗರೆಡ್ಡಿ ಪಾಟೀಲ್‌ ಅವರು, ಕಾಂಗ್ರೆಸ್​ ಪರ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.