ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದ್ದು, ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ. ಬಿಜೆಪಿ ಸರ್ಕಾರದ ಘಟಾನುಘಟಿ ನಾಯಕರೇ ಹಿನ್ನಡೆಯಲ್ಲಿದ್ದು, ಕೈ ಅಭ್ಯರ್ಥಿಗಳು ಗೆಲುವಿನತ್ತ ಮುನ್ನುಗ್ಗಿದ್ದಾರೆ.
ಪ್ರಸಕ್ತ ಚುನಾವಣೆಯಲ್ಲಿ ಕಮಾಲ್ ಮಾಡಿರುವ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತವನ್ನು ಗಳಿಸಿ, ಸರ್ಕಾರವನ್ನು ರಚಿಸುವ ಸಾಧ್ಯತೆಗಳು ನಿಚ್ಚಳವಾಗಿವೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
ಕೆಪಿಸಿಸಿ ಕಚೇರಿಯ ಮುಂದೆ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಕುಣಿದು ಕುಪ್ಪಳಿಸಿ ಸಂಭ್ರಮಚಾರಣೆಯನ್ನು ಶುರು ಮಾಡಿದ್ದಾರೆ. ಅಲ್ಲದೇ ಚುನಾವಣಾ ಅಂತಿಮ ಫಲಿತಾಂಶಕ್ಕಾಗಿ ಕಾಯುತ್ತಿರುವ ಕಾಂಗ್ರೆಸ್ ನಾಯಕರ ಮುಖದಲ್ಲಿ ಮಂದಹಾಸ ಮೂಡಿದ್ದು, ಕಾರ್ಯಕರ್ತರತ್ತ ಕೈ ಬೀಸುತ್ತಿದ್ದಾರೆ.(ಏಜೆನ್ಸೀಸ್)