ನ್ಯೂಸ್

ಶಶಿ ತರೂರ್ ನನಗೆ ದೂರವಾಣಿ ಕರೆ ಮಾಡಿ ಶುಭಹಾರೈಸಿದ್ದಾರೆ; ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಎಐಸಿಸಿ ಕಚೇರಿಯಲ್ಲಿ ಮತದಾನ ಮಾಡಿದ್ದಾರೆ.

ಮತದಾನ ಮಾಡಿ, ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮ ಆಂತರಿಕ ಚುನಾವಣೆಯ ಒಂದು ಭಾಗವಾಗಿ ಈ ಚುನಾವಣೆ ನಡೆಯುತ್ತಿದೆ. ಪಕ್ಷದಲ್ಲಿ ನಾವು ಒಬ್ಬರಿಗೊಬ್ಬರು ಏನೇ ಹೇಳಿದರೂ, ಅದು ಸ್ನೇಹಪೂರ್ವಕವಾಗಿರುತ್ತದೆ. ನಮ್ಮೆಲ್ಲರ ಉದ್ದೇಶ ಒಂದೇ, ಅದು ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟುವುದು ಎಂದು ಹೇಳಿದರು.

ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿರುವ ಚುನಾವಣೆಯ ಹಿನ್ನೆಲೆಯಲ್ಲಿ ಶಶಿ ತರೂರ್ ನನಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ. ನಾನೂ ಕೂಡಾ ಅವರಿಗೆ ಶುಭ ಹಾರೈಸಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ಮತದಾನ ಮಾಡಿದ್ದಾರೆ. ಇವರಿಗೆ ಡಿ.ಕೆ.ಸುರೇಶ್ ಸಾಥ್ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಈವರೆಗೆ 334 ಮಂದಿ ಮತದಾನ ಮಾಡಿದ್ದಾರೆ.