ನ್ಯೂಸ್

ರಾಜ್ಯ ವಿಧಾನಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಬೆಂಗಳೂರು: ಮುಂಬರುವ ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ರಾಜ್ಯ ಕಾಂಗ್ರೆಸ್​ ಇಂದು (ಅಕ್ಟೋಬರ್ 29) ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎರಡು ಪದವಿಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಪ್ರಕಟಿಸಿದೆ. ಪಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಪುಟ್ಟಣ್ಣ ಅವರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಟಿಕೆಟ್​ ನೀಡಲಾಗಿದೆ. ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕಿ ಪೂರ್ಣಿಮಾ ಅವರ ಪತಿ ಶ್ರೀನಿವಾಸ್​ ಅವರಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ:

  • ಬೆಂಗಳೂರು ಪದವೀಧರರ ಕ್ಷೇತ್ರ-ರಾಮೋಜಿ ಗೌಡ
  • ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ
  • ನೈಋತ್ಯ ಶಿಕ್ಷಕರ ಕ್ಷೇತ್ರ-ಕೆ.ಕೆ.ಮಂಜುನಾಥ್
  • ಆಗ್ನೇಯ ಶಿಕ್ಷಕರ ಕ್ಷೇತ್ರ- ಡಿ.ಟಿ.ಶ್ರೀನಿವಾಸ್
  • ಈಶಾನ್ಯ ಪದವೀಧರರ ಕ್ಷೇತ್ರ- ಡಾ.ಚಂದ್ರಶೇಖರ್ ಬಿ. ಪಾಟೀಲ್