ನ್ಯೂಸ್

ರಾಜಸ್ಥಾನ ಚುನಾವಣೆ; 19 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಜೈಪುರ: ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ 19 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.

ಬಿಡುಗಡೆಯಾಗಿರುವ ಎರಡನೇ ಪಟ್ಟಿಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಹಾಗೂ ಸಚಿನ್ ಪೈಲಟ್​ ಅವರ ಆಪ್ತರಿಗೂ ಕಾಂಗ್ರೆಸ್​ ಹೈಕಮಾಂಡ್​ ಮಣೆ ಹಾಕಿದೆ. ಶುಕ್ರವಾರ ಬಿಡುಗಡೆಯಾಗಿರುವ ಮೂರನೇ ಪಟ್ಟಿಯಲ್ಲಿ ಪಕ್ಷೇತರರು ಹಾಗೂ ಬಿಎಸ್​ಪಿ ಶಾಸಕರಿಗೆ ಟಿಕೆಟ್​ ಕೊಡಿಸುವಲ್ಲಿ ಅಶೋಕ್​ ಗೆಹ್ಲೋಟ್ ಯಶಸ್ವಿಯಾಗಿದ್ದಾರೆ.

ಶುಕ್ರವಾರ ಬಿಡುಗಡೆಯಾದ 19 ಅಭ್ಯರ್ಥಿಗಳ ಪಟ್ಟಿಯಲ್ಲಿ 13 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದ್ದು, ಇತ್ತೀಚಿಗೆ ಬಿಜೆಪಿ ತೊರದು ಕಾಂಗ್ರೆಸ್​ ಸೇರಿದ ಬಿಜೆಪಿ ಶಾಸಕಿ ಶೋಭಾ ರಾಣಿ ಕುಶ್ವಾಗು ಧೋಲ್ಪುರದಿಂದ ಟಿಕೆಟ್​ ನೀಡಲಾಗಿದೆ. ಈಗಾಗಲೇ 95 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವ ಕಾಂಗ್ರೆಸ್​ ಉಳಿದ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸುವುದಾಗಿ ತಿಳಿಸಿದೆ.

ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.