ನ್ಯೂಸ್

ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಬಿಜೆಪಿಯಲ್ಲಿಲ್ಲ: ಕಾಂಗ್ರೆಸ್​

Webdesk - Manjunatha B

ಬೆಂಗಳೂರು: ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ ಎಂದು ಕಾಂಗ್ರೆಸ್​ ವಾಗ್ದಾಳಿ ನಡೆಸಿದೆ.

ಈ ಕುರಿತು ಸರಣಿ ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​ ಘಟಕ ವಿಪಕ್ಷ ನಾಯಕನ ಆಯ್ಕೆ, ಆತ್ಮಾವಲೋಕನ ಸಭೆಯಲ್ಲಿನ ಗದ್ದಲದ ಕುರಿತು ಟ್ವೀಟ್​ ಮಾಡಿ ಬಿಜೆಪಿ ಕಾಲೆಳೆದಿದೆ.

ಅವರೇ ಇಲ್ಲದಿದ್ದರೆ ಹೇಗೆ

ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಹಾಗೂ ಬಿಎಸ್​ವೈ ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ.

ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ ಎಂದು ಪ್ರಶ್ನಿಸಿದೆ. ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ ಎಂದು ಆತ್ಮಾವಲೋಕನ ಸಭೆ ಕುರಿತು ಟೀಕಿಸಿದೆ.

ಮನುಷ್ಯಾಕೃತಿಯೂ ಇಲ್ಲ

ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿ ವ್ಯಂಗ್ಯವಾಡಿದೆ.

ಬಾಯಿ ತೆರೆದರೆ ಹೊಲಸು ಮಾತನಾಡುವ ಬಸನ್​ಗೌಡ ಪಾಟೀಲ್​ ಯತ್ನಾಳ್​, ಆರ್​.ಅಶೋಕ್​ ಅವರಿಗೆ ತಾನೇನು ಮಾತಾಡುತ್ತೇನೆ ಎಂಬ ಅರಿವು ಇರುವುದಿಲ್ಲ, ಮಾಜಿ ಸಚಿವ ಆಶ್ವತ್ಥನಾರಾಯಣ ಅವರಿಗೆ ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ, ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನು ಕಾಂಗ್ರೆಸ್​ ಟ್ವೀಟ್​ ಮೂಲಕ ಕುಟುಕಿದೆ.