ಯಳಂದೂರು ಪಟ್ಟಣದ ಕಾಂಗ್ರೆಸ್ ಕಚೇರಿಯ ಬಳಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಕಂದಹಳ್ಳಿ ನಂಜುಂಡಸ್ವಾಮಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು.  
ನ್ಯೂಸ್

ಕಾಂಗ್ರೆಸ್ ಜಯಭೇರಿ, ಸಂಭ್ರಮಾಚರಣೆ

ಯಳಂದೂರು: ಕಾಂಗ್ರೆಸ್ ಪಕ್ಷ ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲೂ ಜಯಗಳಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಗಾಂಧಿ ಸರ್ಕಲ್ ಬಳಿ ಇರುವ ಕಾಂಗ್ರೆಸ್ ಕಚೇರಿಯ ಮುಂಭಾಗ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಿದರು.

ಕಾಂಗ್ರೆಸ್ ಮುಖಂಡ ಕಂದಹಳ್ಳಿ ನಂಜುಂಡಸ್ವಾಮಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು, ಜನಪರ ಆಡಳಿತ ಡಿ.ಕೆ. ಶಿವಕುಮಾರ್ ಅವರ ಚಾಣಾಕ್ಷತನ ಈ ಗೆಲುವಿಗೆ ಕಾರಣವಾಗಿದೆ. ಇದರೊಂದಿಗೆ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಸಚಿವರು ಸ್ಥಳೀಯ ಶಾಸಕರು ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರೂ ಕೂಡ ಅನೇಕ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡಿದ್ದರು. ಈಗ ಫಲಿತಾಂಶ ಹೊರಬಂದಿದ್ದು ಜನಪರ ಆಡಳಿತವನ್ನು ಮೆಚ್ಚಿ ಮತದಾನ ಮಾಡಿದ್ದಾರೆ. ಎಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

ಮುಖಂಡರಾದ ವೈ.ಕೆ.ಮೋಳೆ ದೊಡ್ಡಯ್ಯ, ಗುಂಬಳ್ಳಿ ರಾಜಣ್ಣ, ಮಲ್ಲು, ವಿಶ್ವ, ಮಾದೇಶ್, ರಂಗರಾಮು, ರೇವಣ್ಣ, ನಾರಾಯಣ, ಮಹದೇವಸ್ವಾಮಿ, ಗೋವಿಂದರಾಜು, ಜಾನಿ, ರಾಚಶೆಟ್ಟಿ, ಸೋಮಣ್ಣ, ಮಹೇಶ ಸೇರಿದಂತೆ ಅನೇಕರು ಇದ್ದರು.