ನ್ಯೂಸ್

ಎಸಿಪಿ, ಪಿಐಗೆ ಚಾಕುವಿನಿಂದ ಇರಿದು ಕೊಲ್ಲುವುದಾಗಿ ಕಾನ್‌ಸ್ಟೆಬಲ್ ಬೆದರಿಕೆ

ಗೋವಿಂದರಾಜು ಚಿನ್ನಕುರ್ಚಿ

ಬೆಂಗಳೂರು: ರೌಡಿಶೀಟರ್ ಕೊಲೆ ಪ್ರಕರಣದ ಸಂಬಂಧ ಕರ್ತವ್ಯಲೋಪದಡಿ ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ್ದರು ಎಂದು ಎಸಿಪಿ ಮತ್ತು ಇನ್‌ಸ್ಪೆಕ್ಟರ್‌ಗೆ ಕೊಲೆ ಮಾಡುವುದಾಗಿ ಕಾನ್‌ಸ್ಟೆಬಲ್ ಬೆದರಿಕೆ ಒಡ್ಡಿದ್ದಾರೆ.

ಬಾಣಸವಾಡಿ ಠಾಣೆ ಕಾನ್‌ಸ್ಟೇಬಲ್ ರೇಣುಕ ನಾಯಕ್ ಮೇಲೆ ಆರೋಪ ಬಂದಿದ್ದು, ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ಬಾಣಸವಾಡಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ರೌಡಿ ಕಾರ್ತಿಕೇಯನ್ ಕೊಲೆಯಾಗಿತ್ತು. ಈ ಕೃತ್ಯದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇರೆಗೆ ಕಾನ್‌ಸ್ಟೇಬಲ್‌ಗಳಾದ ಸಂತೋಷ್, ಪುಟ್ಟಸ್ವಾಮಿ ಹಾಗೂ ವಿನೋದ್ ಅವರನ್ನು ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್.ಆರ್.ಜೈನ್ ಅಮಾನತುಗೊಳಿಸಿದ್ದರು. ಅಮಾನತು ಶಿಕ್ಷೆಗೆ ಶಿಫಾರಸುಗೊಂಡಿದ್ದ ರೇಣುಕ ನಾಯಕ್‌ಗೆ ಮಾತ್ರ ಕಡ್ಡಾಯ ರಜೆ ಶಿಕ್ಷೆ ವಿಧಿಸಲಾಗಿತ್ತು.

ಈ ಹಿಂದೆ ಕಾನ್‌ಸ್ಟೇಬಲ್ ಬೆದರಿಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ತನ್ನ ಹೆಸರನ್ನು ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ ಕಾರಣಕ್ಕೆ ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗೆ ೆನ್ ಕರೆ ಮಾಡಿದ ರೇಣುಕ ನಾಯಕ್, ಚಾಕುವಿನಿಂದ ಇರಿದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಆತಂಕಗೊಂಡು ಎಸಿಪಿ, ಕೊನೆ ಕ್ಷಣದಲ್ಲಿ ಶಿಫಾರಸು ವರದಿಯನ್ನು ಹಿಂಪಡೆದಿದ್ದಾರೆ ಎನ್ನಲಾಗಿದೆ.