ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಬಂಡವಾಳ ತೊಡಗಿಸುವಂತೆ ಆಗ್ರಹಿಸಿ ಕಾರ್ಮಿಕ ಮುಖಂಡರು ದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದರು. ಮಂಗೋಟೆ ರುದ್ರೇಶ್, ಜೆ.ಜಗದೀಶ್ ಇತರರಿದ್ದರು. 
ನ್ಯೂಸ್

ವಿಐಎಸ್‌ಎಲ್‌ಗೆ ಬಂಡವಾಳ ಹೂಡಲು ಚಿಂತನೆ

ಭದ್ರಾವತಿ: ನಗರದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಬಿಟ್ಟು ಬಂಡವಾಳ ತೊಡಗಿಸುವಂತೆ ಆಗ್ರಹಿಸಿ ಗುರುವಾರ ವಿಐಎಸ್‌ಎಲ್ ಕಾರ್ಮಿಕ ಸಂಘದ ನಿಯೋಗ ದೆಹಲಿಗೆ ತೆರಳಿ ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದ ಬಿ.ಡ್ಗ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿತು.

ಮನವಿ ಸ್ವೀಕರಿಸಿ ಭರವಸೆ ನೀಡಿರುವ ಕೈಗಾರಿಕಾ ಸಚಿವ ಹಾಗೂ ಸಂಸದರು, ವಿಐಎಸ್‌ಎಲ್ ಕಾರ್ಖಾನೆಗೆ 10 ಸಾವಿರದಿಂದ 15 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವ ಚಿಂತನೆ ನಡೆದಿದೆ. ಹೂಡಿಕೆ ಮಾಡುವ ಸಂಬಂಧ ವರದಿ ತಯಾರಿಸಲು ಕೋಲ್ಕತ ಮೂಲದ ಮೆ.ದಸ್ತರ್ ಕಂಪನಿ ಪ್ರಮುಖರನ್ನು ಕಾರ್ಖಾನೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಐಎಸ್‌ಎಲ್ ಬಂಡವಾಳ ಹೂಡಿಕೆ ವಿಚಾರ ಸಂಸತ್ ಅಧಿವೇಶದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿ, ಸರ್ಕಾರದ ಗಮನ ಸೆಳೆದು ಶಾಶ್ವತ ಪರಿಹಾರಕ್ಕೆ ಆಗ್ರಹಿಸುವುದಕ್ಕಾಗಿ ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದ್ದಾರೆ.

ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ನೇತೃತ್ವದಲ್ಲಿ ತೆರಳಿದ ನಿಯೋಗದಲ್ಲಿ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಜಗದೀಶ್, ಸೇರಿದಂತೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.