ತಾಲೂಕು ಕಚೇರಿ ಆವರಣದಲ್ಲಿರುವ ಕಂದಾಯ ಭವನದಲ್ಲಿ ಶನಿವಾರ ಕನಕ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆ.ಎಂ.ಶಿವಲಿಂಗೇಗೌಡ, ಸಂತೋಷ್ ಕುಮಾರ್, ಬಿಳಿಚೌಡಯ್ಯ, ಕೃಷ್ಣಮೂರ್ತಿ, ಧರ್ಮಶೇಖರ್ ಇತರರಿದ್ದರು. 
ನ್ಯೂಸ್

ಸಾಮಾಜಿಕ ಪಿಡುಗುಗಳ ವಿರುದ್ಧ ನಿರಂತರ ಹೋರಾಟ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿಕೆ
  • ಕನಕ ಜಯಂತಿ ಕಾರ್ಯಕ್ರಮ
ಅರಸೀಕೆರೆ: ಮನುಕುಲದ ಉದ್ದಾರಕ್ಕೆ ಶ್ರಮಿಸಿದ ಮಹನೀಯರ ಸ್ಮರಣೆ ಔಚಿತ್ಯಪೂರ್ಣ ಎಂದು ಕರ್ನಾಟಕ ಗೃಹಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ತಾಲೂಕು ಕಚೇರಿ ಆವರಣದಲ್ಲಿರುವ ಕಂದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಸಮಾನತೆ, ಜಾತಿ ಪದ್ಧತಿ ಸೇರಿದಂತೆ ಹಲವು ಸಾಮಾಜಿಕ ಪಿಡುಗುಗಳ ವಿರುದ್ಧ ಶತಮಾನದಿಂದಲೂ ನಿರಂತರ ಹೋರಾಟ ನಡೆದಿದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರು ಸಮ ಸಮಾಜ ನಿರ್ಮಾಣದ ಮೂಲಕ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಕನಕದಾಸರು ಕುಲ ಕುಲವೆಂದು ಹೊಡೆದಾಡದಿರಿ ,ನಿಮ್ಮ ಕುಲದ ನೆಲೆಯ ಬಲ್ಲಿರಾ ಎಂದು ಅನಿಷ್ಟ ಪದ್ಧತಿಯನ್ನು ಖಂಡಿಸಿದ್ದರು. ಅಂತಹ ಮಹನೀಯರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಬದುಕು ಹಸನಾಗಲಿದೆ ಎಂದು ಹೇಳಿದರು. ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ತೊಂಡಿಗನಹಳ್ಳಿ ಕೃಷ್ಣಮೂರ್ತಿ, ಜಿ.ಪಂ.ಮಾಜಿ ಸದಸ್ಯ ಬಿಳಿಚೌಡಯ್ಯ ಬಿಇಒ ಮೋಹನ್ ಕುಮಾರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಣಾವರ ಶ್ರೀನಿವಾಸ್, ರವಿಕಿರಣ್, ಹರೀಶ್ ,ಆನಂದ್, ಭೂದೇಶ್ವರ ಒಡೆಯರ್ ,ಮಂಜುಳಾ ಬಾಯಿ ಸೇರಿದಂತೆ ಹಲವರು ಹಾಜರಿದ್ದರು. ಕುರುಬ ಸಮಾಜದ ಪ್ರಭಾವಿ ಮುಖಂಡ, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಜಿಪಂ ಮಾಜಿ ಸದಸ್ಯ ಪಟೇಲ್ ಶಿವಪ್ಪ ಅವರನ್ನು ಆಹ್ವಾನಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.