ನ್ಯೂಸ್

ಗುತ್ತಿಗೆದಾರರ ಬಿಲ್ ಬಾಕಿ: ‘ಸರ್ಕಾರ’ ಬ್ರಾಂಡ್‌ ಬೆಂಗಳೂರನ್ನಾಗಿಸುವುದು ಹಾಸ್ಯಾಸ್ಪದ: ಬಿಜೆಪಿ ಟೀಕೆ

ಬೆಂಗಳೂರು: ಗುತ್ತಿಗೆದಾರರಿಗೆ ಪಾವತಿಸಿರುವ ಬಿಲ್​ಗಳಲ್ಲಿ ಬಾಕಿ ಉಳಿಸಿಕೊಂಡಿರುವ ಶೇಕಡ 25 ರಷ್ಟು ಮೊತ್ತವನ್ನು ಮೊತ್ತವನ್ನು ಹಿಡಿದುಕೊಳ್ಳಲಾಗಿದೆ. ಬಾಕಿ ಬಿಲ್ ಬಿಡುಗಡೆ ಮಾಡುವಂತೆ ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮನವಿ ಮಾಡಲಾಗಿದೆ. ಆದರೆ ಅವರು ಅದಕ್ಕೆ ಸ್ಪಂದಿಸಿಲ್ಲ ಎಂದು ಮತ್ತೆ ಹೋರಾಟಕ್ಕೆ ಸಜ್ಜಾಗಲು ಬಿಬಿಎಂಪಿ ಗುತ್ತಿಗೆದಾರರ ಸಂಘ ನಿರ್ಧರಿಸಿದೆ.

ಈ ಕುರಿತು ಟ್ಟೀಟ್ ಮಾಡಿರುವ ಬಿಜೆಪಿ ಗುತ್ತಿಗೆದಾರರಿಗೆ ಬಾಕಿ ಬಿಲ್‌ಗಳನ್ನು ಪಾವತಿಸಲು ಯೋಗ್ಯತೆಯಿಲ್ಲದ ಕಾಂಗ್ರೆಸ್​​ ಸರ್ಕಾರ, ಬೆಂಗಳೂರನ್ನು ಬ್ರಾಂಡ್‌ ಬೆಂಗಳೂರನ್ನಾಗಿಸುತ್ತದೆ ಎನ್ನುವುದು ಹಾಸ್ಯಾಸ್ಪದ ಎಂದು ಟೀಕಿಸಿದೆ.

ಬಿಜೆಪಿ ಟ್ಟೀಟ್​

ಬ್ರಾಂಡ್‌ ಬೆಂಗಳೂರು ಕೇವಲ ಹೆಸರಿಗೆ ಮತ್ತು ಜಾಹೀರಾತಿಗೆ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ. ಗುತ್ತಿಗೆದಾರರಿಗೆ ಬಾಕಿ ಬಿಲ್‌ಗಳನ್ನು ಪಾವತಿಸಲು ಯೋಗ್ಯತೆಯಿಲ್ಲದ ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಬ್ರಾಂಡ್‌ ಬೆಂಗಳೂರನ್ನಾಗಿಸುತ್ತದೆ ಎನ್ನುವುದು ಹಾಸ್ಯಾಸ್ಪದ. ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬಾಕಿ ಬಿಲ್‌ ಪಾವತಿಯಾಗಿಲ್ಲ ಎಂದು ಗುತ್ತಿಗೆದಾರರರು ಮುಷ್ಕರಕ್ಕೆ ಇಳಿಯುತ್ತಿರುವುದು ಇದು ಎರಡನೇ ಬಾರಿ. ಲಜ್ಜೆಗೆಟ್ಟ ಸಿಎಂ ಸಿದ್ದರಾಮಯ್ಯ ಅವರೆ, ಡಿಸಿಎಂ ಡಿಕೆ ಶಿವಕುಮಾರ್ ಅವರೆ, ಇದೇನಾ ನಿಮ್ಮ ಅಸಲಿ ಕರ್ನಾಟಕ ಮಾಡೆಲ್ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಭ್ರಷ್ಟ ಕಾಂಗ್ರೆಸ್​ ಸರ್ಕಾರದ ದುರಾಡಳಿತದಿಂದ ಶಿಕ್ಷಣ ಇಲಾಖೆ ಅಧೋಗತಿ ತಲುಪಿದ್ದು, ರಾಜ್ಯಾದ್ಯಂತ 3,819 ಶಾಲಾ ಕಟ್ಟಡಗಳು ಶಿಥಿಲಾವಸ್ಥೆಗೊಂಡು, ಕುಸಿಯಲು ಕ್ಷಣಗಣನೇ ಎಣಿಸುತ್ತಿವೆ.! ಕೈಲಾಗದ ಸರ್ಕಾರ ಸಂವೇದನೆ, ದೂರದೃಷ್ಟಿ ಕಳೆದುಕೊಂಡ ಪರಿಣಾಮ ಮಳೆಗಾಲದಲ್ಲಿ ಶಾಲಾ ಕೊಠಡಿಗಳ ಪರಿಸ್ಥಿತಿ ಹೇಳತಿರದಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ದಿವ್ಯ ನಿರ್ಲಕ್ಷ್ಯದಿಂದ ಮಕ್ಕಳು ಜೀವಭಯದಲ್ಲಿ ಪಾಠ ಕೇಳಬೇಕಾಗಿದೆ.!

ಸಿಎಂ ತವರು ಜಿಲ್ಲೆಯಲ್ಲಿ 21, ಶಿಕ್ಷಣ ಸಚಿವರ ಜಿಲ್ಲೆಯಲ್ಲಿ 274 ಕೊಠಡಿಗಳು ದುಸ್ಥಿತಿಯಲ್ಲಿರುವುದು ದುರಂತ. ಸಿಎಂ ಸಿದ್ದರಾಮಯ್ಯ ನವರೇ, ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಿ ಎಂದು ಟ್ವೀಟ್​ ಮೂಲಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.