ಮೃತ ಪೊಲೀಸ್​ ಅಧಿಕಾರಿ  
ನ್ಯೂಸ್

ಜಾನುವಾರು ಕಳ್ಳಸಾಗಣೆಯನ್ನು ತಡೆಯಲು ಹೋದ ಪೊಲೀಸ್​ ಅಧಿಕಾರಿ ಹತ್ಯೆ

Webdesk - Manjunatha B

ಬಿಹಾರ: ಜಾನುವಾರು ಕಳ್ಳಸಾಗಣೆ ಮಾಡುತ್ತಿದ್ದವರನ್ನು ಬಂಧಿಸಲು ತೆರಳಿದ್ದ ಪೊಲೀಸ್​ ಅಧಿಕಾರಿಯ ಮೇಲೆ ಚುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಸಮಸ್ತೀಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ನಂದಕಿಶೋರ್​ ಯಾದವ್​ ಮೃತಪಟ್ಟಿದ್ದಾರೆ. ಇವರು ಮೋತಿಹಾರಿ ಪೊಲೀಸ್​ ಠಾಣಾಧಿಕಾರಿಯಾಗಿ​ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ.

ರಕ್ಷಿಸಲ್ಪಟ್ಟ ಜಾನುವಾರು

ಪ್ರಕರಣದ ಹಿನ್ನಲೆ

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿನಯ್​ ತಿವಾರಿ ಜಾನುವಾರುಗಳ ಕಳ್ಳ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ನಮ್ಮ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಮೂವರು ಆರೋಪಿಗಳನ್ನು ಬಂಧಿಸಿ, ಹಸುಗಳನ್ನು ರಕ್ಷಿಸಿ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಬರುವ ವೇಳೆ ಬಂಧಿತರ ಸಹಚರರು ಏಕಾಏಕಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ನಮ್ಮ ಅಧಿಕಾರಿ ನಂದಕಿಶೋರ್​ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳು ತಲೆ ಮಾರಿಸಿಕೊಂಡಿದ್ದು, ಅವರನ್ನು ಪತ್ತೆ ಹಚ್ಚಲು ವಿಶೇಷ ತಂಡ ಒಂದನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿನಯ್​ ತಿವಾರಿ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.