ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ ಹೊಸದಾಗಿ 3,589 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 8,20,398ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರ ಪೈಕಿ ಒಂದೇ ದಿನದಲ್ಲಿ 8,521 ಮಂದಿ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೆ ಗುಣವಾಗಿ ಬಿಡುಗಡೆ ಆಗಿರುವವರ ಸಂಖ್ಯೆ 7,49,740ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 59,499 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿಂದಾಗಿ 935 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಒಂದೇ ದಿನದಲ್ಲಿ 49 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ರಾಜ್ಯದಲ್ಲಿ ಕರೋನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,140ಕ್ಕೆ ಏರಿಕೆ ಆಗಿದೆ.