ನ್ಯೂಸ್

24 ಗಂಟೆಗಳಲ್ಲಿ ಮೂರು ಹೊಸ ಪ್ರಕರಣ: ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ 182 ಜನ ಬಿಡುಗಡೆ- 19 ಸಾವು: ನಿಮ್ಮ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 3 ಹೊಸ ಸೋಂಕಿತರು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿದೆ.

ಇಲ್ಲಿಯವರೆಗೆ ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 503ಕ್ಕೆ ಏರಿದ್ದು, ಈ ಪೈಕಿ 182 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. 19 ಮಂದಿ ಮೃತಪಟ್ಟಿದ್ದರೆ. ಒಬ್ಬ ಗರ್ಭಿಣಿ ಸೇರಿದಂತೆ 296 ಮಂದಿ ಸಾಮಾನ್ಯ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, 6 ಮಂದಿ ಐಸಿಯುನಲ್ಲಿ ಇರಿಸಲಾಗಿದೆ.

ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ಒಂದು ಹಾಗೂ ಕಲಬುರಗಿಯಲ್ಲಿ 2 ಹೊಸ ಸೋಂಕು ಪ್ರಕರಣ ಪತ್ತೆಯಾಗಿದೆ.

ನಿಮ್ಮ ಜಿಲ್ಲೆಯ ಪರಿಚಯ ಇಲ್ಲಿದೆ ನೋಡಿ:

ಇಲ್ಲಿಯವರೆಗೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು ಪತ್ತೆಯಾಗಿದ್ದು, ಎಷ್ಟು ಬಿಡುಗಡೆಯಾಗಿವೆ, ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬುದು ಇಲ್ಲಿ ಉಲ್ಲೇಖಗೊಂಡಿದೆ. ಇಲ್ಲಿ ಹೆಸರು ಇಲ್ಲದಿರುವ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ವರದಿಯಾಗಿಲ್ಲ.