ನ್ಯೂಸ್

ದಾವಣಗೆರೆಯಲ್ಲಿ ಕರೊನಾಗೆ 4ನೇ ಬಲಿ- ನಿಮ್ಮ ಜಿಲ್ಲೆಯಲ್ಲಿ ಹೇಗಿದೆ ಸ್ಥಿತಿ?

ಬೆಂಗಳೂರು: ದಾವಣಗೆರೆಯಲ್ಲಿ ಇಂದು ಕರೊನಾ ಮತ್ತೊಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಇದು ನಾಲ್ಕನೇ ಸಾವಿನ ಪ್ರಕರಣವಾಗಿದ್ದು, ರಾಜ್ಯದಲ್ಲಿ ಇದು 20ನೇ ಪ್ರಕರಣವಾಗಿದೆ.

55 ವರ್ಷದ ಮಹಿಳೆ ಇಂದು ಮೃತಪಟ್ಟವರು. ಇವರು ತೀವ್ರ ಉಸಿರಾಟದ ತೊಂದರೆಯಿಂದ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಜತೆಗೆ ದಾವಣಗೆರೆ ಜಿಲ್ಲೆಯಲ್ಲಿ ಮೂರು ಮಂದಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ದಾವಣಗೆರೆ ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ ಒಟ್ಟಾರೆಯಾಗಿ 701ಕ್ಕೆ ಏರಿಕೆಯಾಗಿದೆ. ಈ ಪೈಕಿ 363 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ ದಾವಣಗೆರೆಯನ್ನು ಹೊರತುಪಡಿಸಿ , ಕಲಬುರಗಿಯಲ್ಲಿ ಮೂವರು, ಬೆಳಗಾವಿಯ ಹಿರೇಬಾಗೇವಾಡಿ ಹಾಗೂ ಬೆಂಗಳೂರು ನಗರದಲ್ಲಿ ತಲಾ ಒಬ್ಬರಿಗೆ ಸೋಂಕು ಬಾಧಿಸಿದೆ.

ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.

ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.