ನ್ಯೂಸ್

ರಾಜ್ಯದ ಜನತೆಗೆ ಎಚ್ಚರಿಕೆಯ ಗಂಟೆ ಬಾರಿಸಿದ ಸಚಿವ ಡಾ.ಸುಧಾಕರ್​!

ಬೆಂಗಳೂರು: ಮಹಾಮಾರಿ ಕರೊನಾ ಸೋಂಕು ಕುರಿತು ರಾಜ್ಯದ ಜನತೆಗೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಸುಧಾಕರ್​ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ.

'ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕರೊನಾ ಪ್ರಕರಣಗಳು ಪತ್ತೆಯಾಗಿದೆ. ಇದು ನನ್ನನ್ನು ಚಿಂತೆಗೀಡು ಮಾಡಿದೆ. ಇದನ್ನ ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ. ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು' ಎಂದು ಟ್ವೀಟ್​ ಮೂಲಕ ಸುಧಾಕರ್ ವಾರ್ನಿಂಗ್​ ಮಾಡಿದ್ದಾರೆ. ಇದನ್ನೂ ಓದಿರಿ ಅಪ್ಪ-ಮಕ್ಕಳದ್ದೂ ಸೇರಿ ಇನ್ನೂ 23 ಸಿಡಿ ಇವೆ ಎಂದ ಯತ್ನಾಳ್

'60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕರೊನಾ ಲಸಿಕೆ ಪಡೆಯಬೇಕು. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ' ಎಂದು ಸಚಿವ ಸುಧಾಕರ್​ ಕೋರಿದ್ದಾರೆ.

ಇನ್ನು 'ರಾಜ್ಯದಲ್ಲಿ ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1ರಿಂದ6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವ ಬಗ್ಗೆ ದೂರುಗಳು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ಗೆ ಟ್ವೀಟ್​ ಮೂಲಕ ಡಾ.ಕೆ.ಸುಧಾಕರ್​ ಮನವಿ ಮಾಡಿದ್ದಾರೆ.