ನ್ಯೂಸ್

ಬಾಲಿವುಡ್​ ನಟ ಅಕ್ಷಯ್​ಕುಮಾರ್​ಗೆ ಕರೊನಾ ಪಾಸಿಟಿವ್​

ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್​ಗೆ ಕರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಅಕ್ಷಯ್ ಕುಮಾರ್, ನನಗೆ ಕರೊನಾ ಪಾಸಿಟಿವ್​ ಇದೆ ಎಂಬುದು ಇಂದು ಬೆಳಗ್ಗೆ ಬಂದ ವರದಿಯಲ್ಲಿ ತಿಳಿಯಿತು. ನಿಯಮದ ಪ್ರಕಾರ ಕ್ವಾರಂಟೈನ್​ಗೆ ಒಳಗಾಗಿದ್ದು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ನನ್ನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರೆಲ್ಲರೂ ದಯವಿಟ್ಟು ಕರೊನಾ ಟೆಸ್ಟ್​ ಮಾಡಿಸಿಕೊಂಡು, ಜಾಗ್ರತೆವಹಿಸಿ. ಶೀಘ್ರದಲ್ಲೇ ಶೂಟಿಂಗ್​ಗೆ ಹಾಜರಾಗ್ತೀನಿ ಎಂದು ಟ್ವೀಟ್ ಮೂಲಕ ಅಭಿಮಾನಿಗಳಿಗೆ ಅಕ್ಕಿ ತಿಳಿಸಿದ್ದಾರೆ. 'ರಾಮ್ ಸೇತು' ಶೂಟಿಂಗ್​ನಲ್ಲಿ ಬಿಜಿಯಾಗಿದ್ದ ಅಕ್ಷಯ್ ಕುಮಾರ್, ಇದೀಗ ಹೋಂ ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ.