ನ್ಯೂಸ್

ಆಸ್ಪತ್ರೆಗೆ ದೇವೇಗೌಡ ದಾಖಲು, ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮಗೆ ಕರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ದೇವೇಗೌಡರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ವಿಚಾರಿಸಿದರು.

ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ ಪ್ರಧಾನಿ ಮೋದಿ, ದೇಶದ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನೀವು ಇಚ್ಚಿಸಿದಲ್ಲಿ, ಅಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಮಾಜಿ ಪ್ರಧಾನಿ ಎಚ್​ಡಿಡಿ, ಬೆಂಗಳೂರಿನಲ್ಲೇ ಚಿಕಿತ್ಸೆ ಪಡೆಯುವುದಾಗಿ ತಿಳಿಸಿದರು. ಈ ಕುರಿತು ಸ್ವತಃ ದೇವೇಗೌಡರೇ ಟ್ವೀಟ್​ ಮೂಲಕ ಹಂಚಿಕೊಂಡಿದ್ದಾರೆ. ಇದನ್ನೂ ಓದಿರಿ ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರಿಗೆ ಕರೆ ಮಾಡಿ ಅವರ ಮತ್ತು ಅವರ ಧರ್ಮಪತ್ನಿಯ ಆರೋಗ್ಯದ ಬಗ್ಗೆ ವಿಚಾರಿಸಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ‌. ಕೆ.ಸುಧಾಕರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿಗೆ ಕರೊನಾ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.