ನ್ಯೂಸ್

ಕರೊನಾ ಸೋಂಕು: ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು

arunakunigal

ಬೆಂಗಳೂರು: ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಇವರ ಪತ್ನಿ ಚನ್ನಮ್ಮ ಅವರಿಗೂ ಕರೊನಾ ಪಾಸಿಟಿವ್​ ಬಂದಿದೆ.

ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೇವೇಗೌಡ ದಂಪತಿಯನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಟ್ವೀಟ್​ ಮೂಲಕ ತಿಳಿಸಿರುವ ದೇವೇಗೌಡ, ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಐಸೋಲೇಶನ್​ಗೆ ಒಳಗಾಗಿದ್ದೇವೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಮುಂಜಾಗ್ರತಾ ಕ್ರಮವಾಗಿ ಕರೊನಾ ಟೆಸ್ಟ್​ ಮಾಡಿಸಿಕೊಳ್ಳಿ. ನನ್ನ ಆರೋಗ್ಯದ ಕುರಿತು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ‌. ಕೆ.ಸುಧಾಕರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿಗೆ ಕರೊನಾ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.