ನ್ಯೂಸ್

ಕರೊನಾ ಸೋಂಕು; ಸಿಎಂ ರಾಜಕೀಯ ಕಾರ್ಯದರ್ಶಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್​ಗೆ ಕರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಅವರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿರಿ ‘ಏನಪ್ಪ ಜಮೀರ್ ನಿನ್ನ ಹೆಸರು ಮೀಡಿಯಾದಲ್ಲಿ ಬರ್ತಿದೆ…’

ನಾನು ಕರೊನಾ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣ ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ವಿಶ್ವನಾಥ್ ವಿವರಿಸಿದ್ದಾರೆ.

ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್​ನಲ್ಲಿದ್ದು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿಕೊಳ್ಳಬೇಕು ಎಂದು ವಿಶ್ವನಾಥ್​ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.