ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಕರೊನಾ ಸೋಂಕು ದೃಢಪಟ್ಟಿದೆ.
ಸೋಮವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡಿದ್ದರಿಂದ ಪಟ್ಟಣದ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದರು. ಮಂಗಳವಾರ ಕರೊನಾ ಪಾಸಿಟಿವ್ ಇರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಇದನ್ನೂ ಓದಿರಿ ಕರೊನಾ ಸೋಂಕು: ಸಚಿವ ಈಶ್ವರಪ್ಪ ಆಸ್ಪತ್ರೆಗೆ ದಾಖಲು
ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಜ್ವರ ವಾಸಿಯಾಗಿದ್ದು, ಕರೊನಾದ ಬೇರಾವ ಲಕ್ಷಣಗಳೂ ಇಲ್ಲ. ಆದರೂ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಜಗದ್ಗುರುಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.