ನ್ಯೂಸ್

ಕೋವಿಡ್​ನಿಂದ ಬಳಲುತ್ತಿರುವ ಉತ್ತರಾಖಂಡ ಮುಖ್ಯಮಂತ್ರಿ ಆಸ್ಪತ್ರೆಗೆ ದಾಖಲು

ಡೆಹ್ರಾಡೂನ್​: ಕರೊನಾ ಸೋಂಕಿನಿಂದ ಬಳಲುತ್ತಿರುವ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತ್ರಿವೇಂದ್ರ ಸಿಂಗ್‌ ಅವರಿಗೆ ಇದೇ ಡಿ. 18ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಜ್ವರ ಕಾಣಿಸಿಕೊಂಡಿದ್ದರಿಂದ ಭಾನುವಾರ ಸಂಜೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.