ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಜಗದೀಶ ಶೆಟ್ಟಿ ಆತ್ಮಹತ್ಯೆ ಯತ್ನ
ಮಂಗಳೂರು: ಮಹಾನಗರ ಪಾಲಿಕೆಯ ಬೋಳೂರು ವಾರ್ಡ್ ಸದಸ್ಯ ಜಗದೀಶ ಶೆಟ್ಟಿ (53) ಅವರು ಗುರುವಾರ ಆತ್ಮಹತ್ಯೆ ಯತ್ನ ನಡೆಸಿದ್ದಾರೆ. ಜಗದೀಶ ಶೆಟ್ಟಿ ಅವರು ನಗರದ ಸ್ಟೇಟ್‌ಬ್ಯಾಂಕ್ ಸಮೀಪ ಕಾರಿನಲ್ಲಿ ವಿಷ ಸೇವಿಸಿದ್ದು, ನಗರದ ಖಾಸಗಿ ಆಸ್ಪತ್ರೆಯ ತೀವ್ರ ನೀಗಾವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.