ಚಿತ್ರದುರ್ಗ ತಹಸೀಲ್ದಾರ್ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ತಂಬಾಕು ತನಿಖಾ ತಂಡ ದಾಳಿ ಸಂಖ್ಯೆ ಹೆಚ್ಚಿಸುವ ಮೂಲಕ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಡಿಸಿ ಕಚೇರಿಯಲ್ಲಿ ಬುಧವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ತಂಬಾಕು ನಿಯಂತ್ರಣಕ್ಕಾಗಿ ತಹಸೀಲ್ದಾರ್,ತಾಲೂಕು ಆರೋಗ್ಯಾಧಿಕಾರಿ,ಬಿಇಒಗಳು, ಶಾಲಾ-ಕಾಲೇಜು ಆವರಣ ಮತ್ತು ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ತಾಲೂಕು ಮಟ್ಟದಲ್ಲಿ ತಂಬಾಕು ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಾಲಾ,ಕಾಲೇಜುಗಳ ಆವರಣದಿಂದ 100 ಮೀಟರ್ ಒಳಗೆ ತಂಬಾಕು ಮಾರುವ ಅಂಗಡಿಗಳ ಮೇಲೆ ದಾಳಿ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ದಾಖಲಿಸಬೇಕೆಂದರು.
ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್ ಮಾತನಾಡಿ,ತಂಬಾಕು ನಿಯಂತ್ರಣ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಡಿಜಿಟಲ್ ಜಾಗೃತಿ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ರೈತರಿಗೆ ಕೃಷಿ ಇಲಾಖೆ ಸಹಯೋಗದೊಂದಿಗೆ ತರಬೇತಿ ನೀಡ ಲಾಗಿದೆ. ಶಾಲಾ-ಕಾಲೇಜು,ವಿದ್ಯಾರ್ಥಿ ನಿಲಯಗಳು,ಪ್ರವಾಸಿ ತಾಣಗಳಲ್ಲಿ ತಂಬಾಕು ಮುಕ್ತ ಪ್ರದೇಶ ಎಂದು ಬರೆಸ ಬೇಕಿದೆ. ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತವೆಂದು ಘೋಷಿಸಲಾಗಿದೆ ಎಂದರು.
ಜೂನ್‌ನಿಂದ ಆಗಸ್ಟ್‌ವರೆಗೂ ಜಿಲ್ಲೆಯಲ್ಲಿ 22 ಶಾಲಾ,ಕಾಲೇಜುಗಳನ್ನು ತಂಬಾಕು ಮುಕ್ತ ಶಾಲೆ,ಕಾಲೇಜುಗಳೆಂದು ಘೋಷಿಸ ಲಾ ಗಿದೆ. ಚಿತ್ರದುರ್ಗ,ಚಳ್ಳಕೆರೆ,ಹೊಳಲ್ಕೆರೆಗಳಲ್ಲಿ ತಾಲೂಕು ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆ ಮಾಡಲಾಗಿದೆ. ಹಿರಿ ಯೂರು ಮತ್ತು ಮೊಳಕಾಲ್ಮೂರು ತಾಲೂಕುಗಳಲ್ಲಿ ಸಭೆಗಳನ್ನು ಆಯೋಜಿಸ ಬೇಕಿದೆ. ತಂಬಾಕು ನಿಯಂತ್ರಣ ನಿಟ್ಟಿನಲ್ಲಿ ವಿವಿಧ ಇಲಾ ಖೆಗಳಿಂದ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ ಎಂದರು.
ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಜಯಲ್ ಥಾಮಸ್,ಜಿಪಂ ಉಪ ಕಾರ‌್ಯದರ್ಶಿ ಡಾ. ರಂಗ ಸ್ವಾಮಿ,ಡಿಎಚ್‌ಒ ಡಾ.ಆರ್.ರಂಗನಾಥ್,ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ,ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮ ತಾ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್,ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ,ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಮಾಜ ಸೇವಕ ಕೆ.ಎಂ.ತಿಪ್ಪೇಸ್ವಾಮಿ ಇದ್ದರು.
-----
(ಡಿಸಿ ಮಗ್‌ಶಾಟ್)