ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ, ಬರಹಗಾರ ರಾಜ್ ಬಿ.ಶೆಟ್ಟಿ ನಟನೆಯ ಬಹುನಿರೀಕ್ಷಿತ ಚಿತ್ರ 'ಟೋಬಿ' ಟ್ರೇಲರ್ ರಿಲೀಸ್ಗೆ ಇದೀಗ ಕ್ಷಣಗಣನೆ ಆರಂಭಗೊಂಡಿದ್ದು, ಆಗಸ್ಟ್ 04 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳ್ಳಲು ಸಜ್ಜಾಗಿದೆ.
ನಾಳೆ ಸಂಜೆ 6.30ಕ್ಕೆ ಬೆಂಗಳೂರಿನ ಹೊಸಕೆರೆಹಳ್ಳಿಯ ನಂದಿ ಲಿಂಕ್ಸ್ ಗ್ರೌಂಡ್ನಲ್ಲಿ 'ಟೋಬಿ' ಚಿತ್ರದ ಟ್ರೇಲರ್ ಅಧಿಕೃತವಾಗಿ ಲಾಂಚ್ ಆಗಲಿದೆ. ಬಸಿಲ್ ಅಲ್ಚಲಕ್ಕಲ್ ನಿರ್ದೇಶನದ ಚಿತ್ರದಲ್ಲಿ ರಾಜ್ ಬಿ.ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಜೆ.ಆಚಾರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.
ಚಿತ್ರದ ಟ್ರೇಲರ್ ಬಿಡುಗಡೆಗೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ,(ಏಜೆನ್ಸೀಸ್).