ನ್ಯೂಸ್

6 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ

lakshmihegde

ಕೋಲಾರ: ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಮ್ಮಸಂದ್ರ ಗ್ರಾಮದ ಮೋಹನ್​ ಬಾಬು (30) ಮತ್ತು ಪದ್ಮಾ (25) ಮೃತರು. ಪತ್ನಿ ಪದ್ಮಾಳನ್ನು ಕತ್ತು ಹಿಸುಕಿ ಕೊಂದು ಬಳಿಕ ಮೋಹನ್​ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇವರಿಬ್ಬರ ಸಾವಿಗೆ ಕಾರಣ ತಿಳಿದುಬಂದಿಲ್ಲ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.